ಏಕೋಪಿ ಕೃಷ್ಣಸ್ಯ ಕೃತಃ ಪ್ರಣಾಮೋದಶಾಶ್ವಮೇಧಾವಭೃತೇನ ತುಲ್ಯ:ದಶಾಶ್ವಮೇಧೀ ಪುನರೇಪಿಜನ್ಮಕೃಷ್ಣಪ್ರಣಾಮೀ ನ ಪುನರ್ಭವಾಯ
Tuesday, July 22, 2025
ಏಕಾದಶಿ ಮತ್ತು ರುಕ್ಮಾ೦ಗದ ಮಹಾರಾಜ
Saturday, July 19, 2025
ಕೆಸರಿಂದ ಕೆಸರು ತೊಳೆದಂತೆ
ಯಥಾ ಪಂಕೇನ ಪಂಕಾಂಭ:ಸುರಯಾ ವಾ ಸುರಾಕೃತಂಭೂತಹತ್ಯಂ ತಥೈವಕಂನ್ ಯಜ್ನಯಿ ಮರ್ತುಮರ್ಹತಿ
"ಹೇಗೆ ಕೆಸರನ್ನು ಕೆಸರಿನಿಂದ ತೊಳೆಯಲಾಗದೋ, ಮತ್ತು ಹೇಗೆ ಮದ್ಯಪಾತ್ರೆಯನ್ನು ಮದ್ಯದಿಂದ ಶುದ್ಧಿಮಾಡಲಾಗದೋ, ಹಾಗೆಯೇ ಮನುಷ್ಯರನ್ನು ಕೊಂದ ಪಾಪಗಳನ್ನು ಪ್ರಾಣಿಗಳನ್ನು ಬಲಿ ಕೊಟ್ಟು ಕಳೆದುಕೊಳ್ಳಲಾಗದು"
*****
ಹರಿದಾಸರ ಪದ, ಸುಳಾದಿ, ಉಗಾಭೋಗಗಳಲ್ಲಿ ಬರುವ ಪದಪುಂಜಗಳಲ್ಲಿ ವೈದಿಕ ವಾಂಗ್ಮಯದ ತಿರುಳಿನ ಸೂಚನೆಗಳು ಇರುತ್ತವೆ. ನೋಡುವುದಕ್ಕೆ, ಕೇಳುವುದಕ್ಕೆ ಆಡುಭಾಷೆಯ ಮಾತಾಗಿದ್ದರೂ ಅವುಗಳ ಹಿಂದೆ ಗಾಢವಾದ ಚಿಂತನೆ ಇರುವುದು. ಈ "ಕೆಸರಿನಿಂದ ಕೆಸರು ತೊಳೆದಂತೆ" ಅನ್ನುವುದು ಹೀಗೆಯೇ ಶ್ರೀಮದ್ ಭಾಗವತದ ಮೇಲೆ ಹೇಳಿದ ಶ್ಲೋಕದ ಸಾರಾಂಶವನ್ನು ಹೇಳುವ ರೀತಿ. ವಿಶಾಲ ವಾಂಗ್ಮಯದ ಆಳವಾದ ಪರಿಚಯ ಆಗುತ್ತಿದ್ದಂತೆ ಅವೇ ಪದ, ಸುಳಾದಿಗಳ ವಿಶೇಷಾರ್ಥಗಳು ತೆರೆದುಕೊಳ್ಳುತ್ತವೆ.
ಪ್ರತಿ ಜೀವಿ ಹುಟ್ಟುವಾಗ ಅವನ (ದೇಹ ಗಂಡಾಗಿರಬಹುದು ಅಥವಾ ಹೆಣ್ಣಾಗಿರಬಹುದು) ಜೊತೆ ಪರಮಾತ್ಮನೂ ಮತ್ತು ಮುಖ್ಯ ಪ್ರಾಣನು ಜನಿಸುತ್ತಾರೆ. ಅವರಿಬ್ಬರೂ ಇರುವವರೆಗೆ ಜೀವನ ಈ ದೇಹದಲ್ಲಿಯ ಜೀವನಯಾತ್ರೆ. ಅವರು ದೇಹ ಬಿಟ್ಟು ಹೊರಟರೆ ವ್ಯಾಪಾರ ಮುಗಿಯಿತು. (ಸಾಮಾನ್ಯ ವ್ಯವಹಾರದಲ್ಲಿ ವ್ಯಾಪಾರ ಎಂದರೆ ಕೊಡು-ಕೊಳ್ಳುವಿಕೆಯ ರೀತಿ, ವ್ಯಾಪಾರಕ್ಕೆ ಇಲ್ಲಿ ಚಟುವಟಿಕೆ (ಆಕ್ಟಿವಿಟಿ) ಎಂದು ಅರ್ಥ). ಪ್ರಾಣವಾಯು (ಅಸು) ಆಡುವುದು ನಿಂತರೆ "ಅಸು ನೀಗಿದರು" ಎನ್ನುತ್ತಾರೆ. ಆದ್ದರಿಂದ ಆ ಪರಮಾತ್ಮನಿಗೆ "ಅಸುನಾಥ"ಎಂದು ಹೇಳುವುದು. ಉಸಿರು ಎನ್ನುವ ಆಸುವಿಗೆ ಅಥವಾ ಪ್ರಾಣನಿಗೆ ಒಡೆಯ ಆದುದರಿಂದ ಅಸುನಾಥ, ಪ್ರಾಣನಾಥ ಅಥವಾ ಪ್ರಾಣೇಶ.
*****
"ದುಷ್ಕರ್ಮ ಪರಿಹರಿಸೋ" ಅನ್ನುವುದನ್ನು ಮತ್ತು ಅಂಟಿಕೊಂಡ ಕೊಳೆಯನ್ನು ತೊಳೆಯಲು ಏನು ಮಾಡಬೇಕೆನ್ನುವುದನ್ನು ಮುಂದಿನ ಒಂದು ಸಂಚಿಕೆಯಲ್ಲಿ ನೋಡೋಣ.
Thursday, July 17, 2025
ಪಾರ್ಥಿವ ಶರೀರ
Wednesday, July 16, 2025
Rip Van Winkle and Solo Date
Monday, July 14, 2025
ಸಂಪತ್ತು ಕಳೆಯುವ ಕಾರಣಗಳು
Friday, July 11, 2025
ಚಿಂತೆ ಎಂಬ ವಿಶಾಲವಾದ ವೃಕ್ಷ

ಲೋಭ: ಪಾಪಶ್ಚ ಬೀಜಂಹಿ ಮೋಹೋ ಮೂಲ೦ಚ ತಸ್ಯಹಿಅಸತ್ಯಂ ತಸ್ಯವೈ ಸ್ಕಂಧಃ ಮಾಯಾ ಶಾಖಾ ಸುವಿಸ್ತರಃದಂಭ ಕೌಟಿಲ್ಯ ಪತ್ರಾಣಿ ಕುಬುಧ್ಯಾ ಪುಷ್ಪಿತಃ ಸದಾಅನೃತಂ ತಸ್ಯವೈ ಸೌಗಂಧ: ಫಲಾ ಅಜ್ನ್ಯಾನಮೇವ ಚ
"ಪಾಪ" ಅನ್ನುವ ಹೆಮ್ಮರಕ್ಕೆ ಈ "ಲೋಭ" ಅನ್ನುವುದೇ ಬೀಜರೂಪವು. ಈ ಲೋಭವು ಮನಸ್ಸು ಎಂಬ ಮಣ್ಣಿನಲ್ಲಿ ಬಿದ್ದ ತಕ್ಷಣ ಬೇರು ಬಿಡಲಾರಂಭಿಸುತ್ತದೆ. ಲೋಭವು ಹೆಚ್ಚಿದಷ್ಟೂ ಬೇರುಗಳು ಆಳ ಮತ್ತು ವಿಶಾಲ ಆಗುತ್ತವೆ. "ಮೋಹ" ಎನ್ನುವುದೇ ಅದರ ಬೇರು. ಈ ಮರಕ್ಕೆ "ಅಸತ್ಯ" ಎನ್ನುವ ಒಂದು ದೊಡ್ಡದಾದ ಕಾಂಡವಿದೆ. "ಕಪಟತನ" (ಮಾಯಾ) ಅನ್ನುವುದು ಈ ಅಸತ್ಯ ಎನ್ನುವ ಭಾರಿ ಕಾಂಡದಿಂದ ಹೊರಡುವ ಅನೇಕ ಕೊಂಬೆಗಳು. "ದಂಭ" ಮತ್ತು "ಕುಟಿಲತೆ" ಅನ್ನುವುವು ಈ ಅಸತ್ಯವೆಂಬ ಕೊಂಬೆಗಳಲ್ಲಿ ಬೆಳೆಯುವ ಅಸಂಖ್ಯಾತ ಎಲೆಗಳು. ಆ ಅನೇಕ ಕೊಂಬೆಗಳ ಮೇಲೆ, ಎಲೆಗಳ ನಡುವೆ, "ಕುಬುದ್ಧಿ" ಎನ್ನುವ ಹೂವು ಸದಾ ಬಿಡುತ್ತದೆ. ಹೂವುಗಳಲ್ಲಿ ಸಾಮಾನ್ಯವಾಗಿ ಸುವಾಸನೆ ಇದ್ದರೆ ಈ ಕುಬುದ್ಧಿ ಅನ್ನುವ ಹೂವಿನಲ್ಲಿ "ಸುಳ್ಳು ಮಾತುಗಳು" ಎನ್ನುವ ಅನೇಕ ರೀತಿಯ ದುರ್ವಾಸನೆಗಳು ಹರಡಲು ತಯಾರು. ಒಂದು ಮರದಲ್ಲಿ ಇಷ್ಟೆಲ್ಲಾ ಇರುವಾಗ ಕಡೆಗೆ ಅದರಲ್ಲಿ ಹಣ್ಣುಗಳು ಬಲೇಬೇಕಲ್ಲ? ಈ ಪಾಪವೆಂಬ ಮರಕ್ಕೆ "ಅಜ್ಞಾನ" ಎನ್ನುವುದೇ ಹಣ್ಣುಗಳಾಗಿ ತೋರುತ್ತವೆ. ಇಂತಹ ಮರದಲ್ಲಿ ಈ ಅಜ್ಞಾನ ಅನ್ನುವ ಹಣ್ಣಿನ ಆಸೆಯಿಂದ ಕಪಟತನ, ಪಾಖಂಡತನ, ಕ್ರೌರ್ಯ, ಅಸೂಯೆ, ಮುಂತಾದ ಇತರ "ದುರ್ಗುಣ" ರೂಪಗಳ ಹಕ್ಕಿಗಳು ಬಂದು ಸೇರುತ್ತವೆ!
ಮರಗಿಡಗಳಿಗೆ ಸಾಮಾನ್ಯವಾಗಿ ವರ್ಷದಲ್ಲಿ ಕೆಲವು ತಿಂಗಳುಗಳು ಹೂವು ಮತ್ತು ಹಣ್ಣು ಬಿಡುವ ಕಾಲ. ಆದರೆ ಈ ಪಾಪವೆಂಬ ಮರದಲ್ಲಿ ವರುಷಕ್ಕೆ ಹನ್ನೆರಡು ತಿಂಗಳೂ ಕುಬುದ್ಧಿ ಎನ್ನುವ ಹೂವು ಅರಳುತ್ತದೆ! ಸದಾಕಾಲವೂ ಅಜ್ಞಾನವೆಂಬ ಹಣ್ಣು ತುಂಬಿರುತ್ತದೆ.
"ಜಂಭ" ಮತ್ತು "ದಂಭ" ಇವುಗಳಿಗೆ ವ್ಯತ್ಯಾಸವಿದೆ. ಇರುವುದನ್ನು ಹೆಚ್ಚಾಗಿ ಹೇಳಿಕೊಳ್ಳುವುದು ಜಂಭ. ಇಲ್ಲದೆ ಇರುವುದನ್ನು ಹೇಳಿಕೊಳ್ಳುವುದು ದಂಭ. ಉದಾಹರಣೆಗೆ: ಒಬ್ಬನ ಜೇಬಿನಲ್ಲಿ ಒಂದು ಸಾವಿರ ರೂಪಾಯಿ ಇದೆ. ಅವನು ಹತ್ತು ಸಾವಿರ ರೂಪಾಯಿ ಇದೆ ಎಂದು ಹೇಳಿದರೆ ಅದು ಜಂಭ ಕೊಚ್ಚಿಕೊಳ್ಳುವುದು. ಇನ್ನೊಬ್ಬನ ಜೇಬಿನಲ್ಲಿ ಒಂದು ರೂಪಾಯಿಯೂ ಇಲ್ಲ. ಅವನು ತನ್ನ ಜೇಬಿನಲ್ಲಿ ಒಂದು ಸಾವಿರ ರೂಪಾಯಿ ಇದೆ ಎಂದು ಹೇಳಿದರೆ ಅದು ದಂಭ.
"ಕುಟಿಲ" ಅಂದರೆ "ನೆಟ್ಟಗಿಲ್ಲದ್ದು" ಎಂದು ಅರ್ಥ. ಸೊಟ್ಟಗಿದೆ ಎನ್ನಬಹುದು. ಶ್ರೀಕೃಷ್ಣನ ವರ್ಣನೆಯಲ್ಲಿ "ಕುಟಿಲ ಕುಂತಲಂ ಕುವಲಯ ದಳ ನೀಲಂ" ಎನ್ನುತ್ತೇವೆ. ಇಲ್ಲಿ ಕುಟಿಲ ಕುಂತಲಂ ಅಂದರೆ "ಗುಂಗುರು ಕೂದಲು" ಎಂದು ಅರ್ಥ. ಕೆಲವರಿಗೆ, ಅದರಲ್ಲೂ ಮಕ್ಕಳಿಗೆ, ಗುಂಗುರು ಕೂದಲು ಇದ್ದರೆ ಸುಂದರ. ಆದರೆ ನಡೆ-ನುಡಿ ನೇರವಾಗಿರಬೇಕು. ವಕ್ರವಾಗಿರಬಾರದು. ಹೇಳುವುದು, ತೋರಿಸುವುದು ಒಂದು ರೀತಿ. ಆದರೆ ಅದರ ಅರ್ಥ, ಆಚರಣೆ ಇನ್ನೊಂದು ರೀತಿ. ಹೀಗಿದ್ದರೆ ಇದನ್ನೇ "ಕುಟಿಲ ನೀತಿ" ಅನ್ನುವುದು. ಕುಟಿಲ ಸ್ವಭಾವ ಇರುವವರನ್ನು ನಂಬಬಾರದು. ಮಹಾಭಾರತದ ಶಕುನಿ ಇದಕ್ಕೆ ಅತ್ಯುತ್ತಮ ಉದಾಹರಣೆ.
*****
ಸುಮನಾ ಹೇಳಿರುವ ಮೇಲಿನ ಪಾಪ ಎಂಬ ಮರದ ವಿವರಗಳು ಬಹಳ ಅರ್ಥವತ್ತಾಗಿದ್ದು ಮೊದಲ ನೋಟದಲ್ಲಿ ಅಷ್ಟು ಸುಲಭವಾಗಿ ಗೊತ್ತಾಗುವುದಿಲ್ಲ. ಆದರೆ ನಿಧಾನವಾಗಿ ಓದಿ, ನಮ್ಮ ನಮ್ಮ ಅನುಭವದ ಹಿನ್ನೆಲಿಯಲ್ಲಿ ಮೆಲಕು ಹಾಕಿದಾಗ ಅದರ ಸತ್ಯವು ನಿಚ್ಚಳವಾಗಿ ಗೋಚರಿಸುತ್ತದೆ.
"ಪದ್ಮ ಪುರಾಣ" ಸುಮಾರು ಐವತ್ತೈದು ಸಾವಿರ (55,000) ಶ್ಲೋಕಗಳಿರುವ ಒಂದು ಗ್ರಂಥ. ಏಳು (7) ಖಂಡಗಳ ಏಳು ನೂರ ಮೂರು (703) ಅಧ್ಯಾಯಗಳಲ್ಲಿ ಹರಡಿಕೊಂಡಿದೆ. ಶ್ರೀಮದ್ ಭಾಗವತಕ್ಕಿಂತ ಗಾತ್ರದಲ್ಲಿ ಮೂರುಪಟ್ಟು ದೊಡ್ಡದು. ಇಷ್ಟು ವಿಶಾಲ ಗ್ರಂಥದಲ್ಲಿರುವ ವಿಷಯಗಳ ಹರವನ್ನು ನೋಡಿದರೆ ವಿಸ್ಮಯವಾಗುತ್ತದೆ.
ಭಗವಾನ್ ವೇದವ್ಯಾಸರು ನಮಗೆ ಕೊಟ್ಟಿರುವ ಗ್ರಂಥ ಲೋಕವನ್ನು ನಮ್ಮ ಜೀವನ ಕಾಲದಲ್ಲಿ ಒಮ್ಮೆ ಸರಿಯಾಗಿ ಓದಿ ಮನನ ಮಾಡುವುದೂ ಒಂದು ದೊಡ್ಡ ಸಾಧನೆಯೇ ಆಗುತ್ತದೆ. ಅವುಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುವುದಂತೂ ಇನ್ನೂ ದೂರದ ಮಾತು. ಆಚರಣೆಯಲ್ಲಿ ತರುವುದು ಒಂದು ತಪಸ್ಸೇ ಸರಿ. ಇಷ್ಟು ಕೃತಿರಚನೆ ಹೇಗಾಯಿತು ಎನ್ನುವುದು ನೋಡಿ ಕೇವಲ ಕೈ ಮುಗಿಯಬಹುದು. ಅಷ್ಟೇ. "ವ್ಯಾಸ ಪೂರ್ಣಿಮಾ" ಸಂದರ್ಭದಲ್ಲಿ ಇಂತಹ ಅನೇಕ ಗ್ರಂಥಗಳ ಕರ್ತೃವಾದ ಭಗವಾನ್ ವೇದ ವ್ಯಾಸರಿಗೆ ನಮ್ಮ ಅತ್ಯಂತ ಕೃತಜ್ಞತಾ ಪೂರ್ವಕವಾದ ಗೌರವಾದರ, ನಮನಗಳು ಸಲ್ಲಬೇಕು.
Tuesday, July 8, 2025
ಮಲಗಿಲ್ಲದವನನ್ನು ಎಬ್ಬಿಸುವುದು!
- ಮೊದಲನೆಯ ನುಡಿಯಲ್ಲಿ ವಾಹನನಾದ ಗರುಡನ ಬರವು, ದ್ವಾರದಲ್ಲಿ ಅವನ ನಿರೀಕ್ಷೆ, ಮತ್ತು ಹಕ್ಕಿ-ಪಕ್ಷಿಗಳ ಕಲರವ ರೂಪದ ಪ್ರಾರ್ಥನೆ. ಸೃಷ್ಟಿಯಲ್ಲಿಯ ಸಕಲ ಶಬ್ದಗಳೂ ಪರಮಾತ್ಮನ ಕುರಿತೇ ಹೇಳುತ್ತವೆ ಎನ್ನುವ ಪ್ರಮೇಯದ ನಿರೂಪಣೆ.
- ಎರಡನೆಯ ನುಡಿಯಲ್ಲಿ ಅವನ ದರ್ಶನ ಮಾಡಲು ಪ್ರತಿ ದಿನ ಆಗಮಿಸುವ ಸನಕ, ಸನಂದನ, ಸನತ್ಸುಜಾತ, ಸನತ್ಕುಮಾರರ ಬರವು, ಪರಮಾತ್ಮನ ಕುರಿತು ವಿಶೇಷ ಕೃತಿ ರಚನೆ ಮಾಡಿದ ವ್ಯಾಸ-ವಾಲ್ಮೀಕಿಗಳು, ಮತ್ತು ಅವನ್ನು ಹಾಡಿ-ಹೇಳುತ್ತಾ ಪ್ರಚುರಪಡಿಸಿದ ಶುಕ-ಶೌನಕರ ನೆನಪು.
- ಮೂರನೆಯ ನುಡಿಯಲ್ಲಿ ದೇವತೆಗಳು, ಕಿನ್ನರರು, ಕಿಂಪುರುಷರು, ಉರಗರು ಮೊದಲಾದ ಗುಂಪುಗಳ ಸದಸ್ಯರು ಅವನ ಗುಣಗಳನ್ನು ಹೊಗಳುವ ಪರಿ. ಅರುಣೋದಯ ಮತ್ತು ಬಾಲ ಸೂರ್ಯನ ಕಿರಣಗಳ ಪಸರಿಸುವ ವಿವರಣೆ.
- ನಾಲ್ಕನೆಯ ನುಡಿಯಲ್ಲಿ ವೈಕುಂಠದವರೆಗೂ ಬರಲಾಗದ, ಆದರೆ ಅವರಿದ್ದ ಕಡೆಯೇ ಉದಯರಾಗ ಹಾಡುತ್ತ ತಮ್ಮ ಮನೆ ಕೆಲಸಗಳನ್ನು ಮಾಡುವ ಗೃಹಿಣಿಯರು. ಅವನನ್ನು ಕುರಿತು ಹಾಡುವಾಗ ಮೊಸರು ಕಡೆದರೆ, ಹಾಡು ಮುಗಿಯುವ ವೇಳೆಗೆ ಬೆಣ್ಣೆಯೂ ಬಂತು.
- ಐದನೆಯ ನುಡಿಯಲ್ಲಿ ಪರಿಪರಿಯಿಂದ ಹಾಡುತ್ತಾ ದರ್ಶನ ಬೇಡುವ ಅಸಂಖ್ಯಾತ ಭಕ್ತರ ಆರ್ತನಾದ. ಲೌಕಿಕದಲ್ಲಿ ಮಲಗಿದವರನ್ನು ಎಬ್ಬಿಸುವವರ ತಾಳ್ಮೆ ಕಳೆದುಕೊಳ್ಳುವ ಸೂಚನೆ. "ಪುರಂದರ ವಿಠಲ, ನೀನೇಳೋ!" ಎನ್ನುವ ಗಡಸು ಧ್ವನಿ!
ಈ ಹಾಡಿನ ಜೊತೆಗೆ ಅವರ ಕಾರ್ಯಕ್ರಮದ ಭರತವಾಕ್ಯ ಕೂಡ ಸೇರಿಸಿ ಮಂಗಳ ಹಾಡುತ್ತಾರೆ. ಸಾಹಿತ್ಯ, ಸಂಗೀತ, ಅಭಿನಯಗಳ ಅಪೂರ್ವ ರಸಾಯನ.
Sunday, July 6, 2025
ಐದು ರೀತಿಯ ಮಕ್ಕಳು
ಋಣಸಂಬಂಧಿನಃ ಕೇಚಿತ್ ಕೇಚಿತ್ ನ್ಯಾಸಾಪಹಾರಕಾ:ಲಾಭಪ್ರದಾ ಭವಂತೇ ಕೇ ಉದಾಸೀನಾ ತಥಾಪರೇ
- ಮೊದಲನೆಯ ವರ್ಗದ ಮಕ್ಕಳು "ಸಾಲ ವಸೂಲಿಗೆ ಬಂದವರು". ಹಿಂದಿನ ಜನ್ಮಗಳಲ್ಲಿ ನಾವು ಯಾರಿಂದಲಾದರೂ ಹಣ-ಕಾಸು, ವಸ್ತುಗಳನ್ನು ಸಾಲ ಪಡೆದು ಹಿಂದಿರುಗಿಸದಿದ್ದರೆ ಹಾಗೆ ಸಾಲಕೊಟ್ಟವರು ಈ ಜನ್ಮದಲ್ಲಿ ನಮ್ಮ ಮಕ್ಕಳಾಗಿ ಹುಟ್ಟಿ ನಮ್ಮಿಂದ ಅದನ್ನು ಬಡ್ಡಿ ಸಹಿತ ವಸೂಲಿ ಮಾಡಲು ಹುಟ್ಟಿದ ಮಕ್ಕಳು ಇವರು. ಇವರಿಂದ ತಂದೆ-ತಾಯಿಗಳಿಗೆ ಯಾವುದೇ ಪ್ರಯೋಜನ ಇರುವುದಿಲ್ಲ. ತಮ್ಮ ಸಾಲ ವಸೂಲಾಗುವವರೆಗೂ ಜೊತೆಯಲ್ಲಿದ್ದು, ಅದು ಮುಗಿದ ಕೂಡಲೇ ಹೊರಟು ಹೋಗುತ್ತಾರೆ. ಇವರು "ಋಣಸಂಬಂಧಿ ಮಕ್ಕಳು".
- ಎರಡನೆಯ ವರ್ಗದ ಮಕ್ಕಳು "ತಿಂದದ್ದು ಕಕ್ಕಿಸುವವರು". ಯಾವುದೋ ಜನ್ಮದಲ್ಲಿ ಇನ್ನೊಬ್ಬರ ಹಣವನ್ನು ಅಥವಾ ವಸ್ತು-ಆಸ್ತಿಗಳನ್ನು ಅನ್ಯಾಯವಾಗಿ ತಿಂದುಹಾಕಿದ್ದರೆ ಆ ರೀತಿ ಕಳೆದುಕೊಂಡವರು ಈ ಜನ್ಮದಲ್ಲಿ ಮಕ್ಕಳಾಗಿ ಬಂದು ಅದನ್ನು ಹಿಂಪಡೆಯುವವರು. ಮೊದಲನೆಯ ವರ್ಗದವರಿಗೂ ಇವರಿಗೂ ಏನು ವ್ಯತ್ಯಾಸ? ಮೊದಲನೆಯದು ನಾವು ಸಾಲ ಕೇಳಿ ಅವರು ಒಪ್ಪಿ ಕೊಟ್ಟವರು. ಎರಡನೆಯವರು ಅವರಿಂದ ನಾವು ಅನ್ಯಾಯವಾಗಿ ಕಿತ್ತುಕೊಂಡುದರಿಂದ ನಷ್ಟ ಅನುಭವಿಸಿದವರು. ಆದುದರಿಂದ ಇವರ ವ್ಯವಹಾರ ಮೊದಲನೆಯ ವರ್ಗಕ್ಕಿಂತ ಹೆಚ್ಚು ಕಠಿಣವಾಗಿರುತ್ತದೆ.
- ಮೂರನೆಯ ವರ್ಗದ ಮಕ್ಕಳು "ಲಾಭಪ್ರದರು". ಕಳೆದ ಜನ್ಮಗಳಲ್ಲಿ ನಾವು ಮತ್ತೊಬ್ಬರಿಗೆ ಉಪಕಾರ ಮಾಡಿದ್ದರೆ ಅದರ ಸ್ಮರಣೆಯಿಂದ ಈ ಜನ್ಮದಲ್ಲಿ ನಮಗೆ ಉಪಕಾರ ಮಾಡಲು ಹುಟ್ಟಿದವರು. ಇವರು ತಂದೆ-ತಾಯಿಯರಿಗೆ ಬಹಳ ಅನುಕೂಲ ಮಾಡಿಕೊಡುವ ಮಕ್ಕಳಾಗುತ್ತಾರೆ. ಕೆಲವೊಮ್ಮೆ ಮಕ್ಕಳು ತಾಯಿ ಮತ್ತು ತಂದೆ ಇಬ್ಬರಲ್ಲಿ ಒಬ್ಬರಿಗೆ ಮಾತ್ರ ಅನುಕೂಲರಾಗಿರಬಹುದು. ಇದು ಮಕ್ಕಳಾಗಿ ಹುಟ್ಟಿದವರು ಯಾರಿಂದ ಹಿಂದೆ ಉಪಕೃತರಾಗಿದ್ದರೋ ಅದರ ಮೇಲೆ ಅವಲಂಬಿಸುತ್ತದೆ.
- ನಾಲ್ಕನೆಯ ವರ್ಗದ ಮಕ್ಕಳು "ಉದಾಸೀನ ಪುತ್ರರು". ಇವರು ಮೇಲಿನ ಮೂರೂ ಕಾರಣಗಳಿಲ್ಲದ ಮಕ್ಕಳು. ಇವರು ಅವರ ಹಿಂದಿನ ಜನ್ಮಗಳ ಫಲಗಳನ್ನು ಅನುಭವಿಸಲು ಹುಟ್ಟಿದವರು. ಜನ್ಮ ಪಡೆಯುವುದಕ್ಕಾಗಿ ಮಾತ್ರವೇ ತಾಯಿ-ತಂದೆಯರ ಆಶ್ರಯ ಪಡೆದವರು. ಇಂತಹವರು ತಮ್ಮ ಪಾಡು ತಾವು ನೋಡಿಕೊಂಡು ತಂದೆ-ತಾಯಿಯರ ವಿಷಯದಲ್ಲಿ ಉದಾಸೀನರಾಗಿರುತ್ತಾರೆ.
Saturday, July 5, 2025
ಮನಸ್ಸು ಮತ್ತು ಗಜಚರ್ಮಾ೦ಬರಧರ
ಮನಸು ಕಾರಣವಲ್ಲ ಪಾಪ ಪುಣ್ಯಕ್ಕೆಲ್ಲಅನಲಾಕ್ಷ ನಿನ್ನ ಪ್ರೇರಣೆ ಇಲ್ಲದೇದನುಜಗಜ ಮದಹಾರಿ ದಂಡ ಪ್ರಣಾಮ ಮಾಳ್ಫೆಮಣಿಸೋ ಈ ಶಿರವನ್ನು ಸಜ್ಜನರ ಚರಣದಲಿ
ಪರಶಿವನ ಆರಾಧನೆ ಮಾಡುವಾಗ ಅವನ ಅನೇಕ ಹೆಸರುಗಳನ್ನೂ, ವಿಶೇಷಣಗಳನ್ನೂ ಉಪಯೋಗಿಸುತ್ತೇವೆ. ಹೀಗೆ ಅವನ ಅನೇಕ ಹೆಸರುಗಳನ್ನು ಹೇಳುವಾಗ "ಕೃತ್ತಿವಾಸ" "ಚರ್ಮಾ೦ಬರ" "ಚರ್ಮಾ೦ಬರಧರ" 'ಗಜಚರ್ಮಾ೦ಬರಧರ" ಮುಂತಾಗಿ ಹೇಳುತ್ತೇವೆ. ಏಕೆ? "ದನುಜ ಗಜ ಮದಹಾರಿ" ಎಂದು ಏಕೆ ಹೇಳಿದರು?
ಅನೇಕ ಜನ ರಕ್ಕಸರು ಸಜ್ಜನರ ಹಿಂಸಕರಾಗಿ ಅವರ ಜೀವನಗಳಿಗೆ ಉಪದ್ರವ ಕೊಡುವುದೇ ವೃತ್ತಿ ಮಾಡಿಕೊಂಡಿದ್ದರು. ಈಗಲೂ ಇದ್ದಾರೆ. ಇಂತಹ ದನುಜರ ಉಪಟಳದಿಂದ ತಮ್ಮನ್ನು ರಕ್ಷಿಸಲು ಸುಜೀವರು ರುದ್ರದೇವರನ್ನು ಪ್ರಾರ್ಥಿಸುತ್ತಾರೆ. ಶಂಭುವು ಸುರಗುರುವು. ಹಿಂದೆ ಒಬ್ಬ ರಾಕ್ಷಸನು ಸಜ್ಜನರಿಗೆ ಬಹಳ ತೊಂದರೆಯನ್ನು ಕೊಡುತ್ತಿದ್ದ. ಆಗಾಗ ಆನೆಯ ರೂಪವನ್ನು ಧರಿಸಿ ಮದಿಸಿದ ಆನೆ ಮನಸ್ಸು ಬಂದಂತೆ ಎಲ್ಲ ಕಡೆ ಧಾಂಧಲೆ ಮಾಡುವಂತೆ ನಡೆದುಕೊಳ್ಳುತ್ತಿದ್ದ. ಆರ್ತ ಭಕ್ತರ ಮನವಿಗೆ ಸ್ಪಂದಿಸಿ ಮಹಾದೇವನು ಆ ಗಜಾಸುರನನ್ನು ಕೊಂದನು. ಅವನ ಚರ್ಮವನ್ನು ಸುಲಿದು ಅದನ್ನೇ ವಸ್ತ್ರದಂತೆ ಧರಿಸಿ "ಒಳ್ಳೆಯ ಜೀವಿಗಳಿಗೆ ಕಷ್ಟ ಕೊಡುವ ದುರುಳರಿಗೆ ಇದೇ ಗತಿ" ಎಂದು ಮಾದರಿ ಮಾಡಿ ತೋರಿಸಿದನು. ಮದಿಸಿದ ಆನೆಯ ರೂಪದ ಗಜಾಸುರನ ಸೊಕ್ಕನ್ನು ಅಡಗಿಸಿ ಕೊಂದುದರಿಂದ "ದನುಜ ಗಜ ಮದ ಹಾರಿ" ಆದನು. ಚರ್ಮವನ್ನು ಹೊದ್ದುದರಿಂದ "ಚರ್ಮಧಾರಿ" ಆದನು. ಆನೆಯ ಚರ್ಮವಾದುದರಿಂದ "ಗಜಚರ್ಮಾ೦ಬರಧರ" ಎಂದು ಹೆಸರಾಯಿತು.
ಮಹೇಶ್ವರನು ಕೇವಲ ದುಷ್ಟರ ಶಿಕ್ಷೆಗೆ ಮಾತ್ರವಲ್ಲದೆ ಒಳ್ಳೆಯವರಿಗೆ ಬಹುಪ್ರೀತಿ ತೋರಿಸುವ ಕರುಣಾಳು. ಉಮಾಪತಿಗೆ ಕೆಟ್ಟವರನ್ನು ಕಂಡರೆ ಎಷ್ಟು ಕೋಪವೋ, ಒಳ್ಳೆಯವರನ್ನು ಕಂಡರೆ ಅಷ್ಟೇ ಪ್ರೀತಿ. "ಖಳಜನ ಕೃತರೋಷ:". ಹಾಗೆಯೇ "ಭಕ್ತಜನಾಶ್ರ್ರಯ ವರದ". ಪೊಲೀಸು ಅಧಿಕಾರಿಗೆ ಕಳ್ಲರು ಹೆದರುವಂತೆ ದುಷ್ಟರು ಅವರನ್ನು ಕಂಡರೆ ಹೆದರುತ್ತಾರೆ. ಸಜ್ಜನರು ರಕ್ಷಣೆಗೆ ಅವರ ಮೊರೆ ಹೋಗುತ್ತಾರೆ.
*****
ದೇವೇಂದ್ರನು ಎಲ್ಲ ದೇವತೆಗಳಿಗೆ ಅಧಿಪತಿಯು. ಸಕಲ ಮಂತ್ರಪೂತ ಅಸ್ತ್ರಗಳೂ ಅವನ ಬಳಿ ಇವೆ. ಯಾವ ಅಸ್ತ್ರ ಬೇಕಾದರೂ ಅವನನ್ನೇ ಕೇಳಬೇಕು. ಮಹಾಭಾರತದ ಕುರುಕ್ಷೇತ್ರ ಯುದ್ಧಕ್ಕೆ ತಯಾರಾಗಲು ಅರ್ಜುನನು ವನವಾಸ ಕಾಲದಲ್ಲಿ ಅಸ್ತ್ರಗಳ ಶೇಖರಣೆಗೆ ಹೊರಡುತ್ತಾನೆ. ತಪಸ್ಸಿನಿಂದ ದೇವೇಂದ್ರನನ್ನು ಮೆಚ್ಚಿಸುತ್ತಾನೆ. ಅಸ್ತ್ರಗಳನ್ನು ಕೇಳುತ್ತಾನೆ. ದೇವೇಂದ್ರನು ಅರ್ಜುನನು ತನ್ನ ಮಗನಾದರೂ ಅವನಿಗೆ ಕೊಡುವುದಿಲ್ಲ. "ಎಲ್ಲ ಅಸ್ತ್ರಗಳೂ ನನ್ನ ಬಳಿ ಇವೆ. ಆದರೆ ನಾನು ಅವುಗಳ ನ್ಯಾಸಾಧಿಕಾರಿ (ಟ್ರಸ್ಟಿ) ಇರುವಂತೆ. ಮಹಾದೇವರು ಅವುಗಳ ಒಡೆಯರು. ಅವರ ಅಪ್ಪಣೆ ಇಲ್ಲದೆ ನಾನು ಕೊಡುವುದಿಲ್ಲ. ಮೊದಲು ಅವರನ್ನು ಮೆಚ್ಚಿಸಿ ಅವರ ಪ್ರೀತಿ ಸಂಪಾದಿಸು. ಅವರಿಂದ "ಪಾಶುಪತ" ಅನ್ನುವ ಅಸ್ತ್ರವನ್ನು ಪಡೆದುಕೋ. ನಂತರ ಅವರ ಅಪ್ಪಣೆಯಾಗುವುದರಿಂದ ನಾನು ಬೇರೆ ಎಲ್ಲ ಅಸ್ತ್ರಗಳನ್ನೂ ಕೊಡುತ್ತೇನೆ" ಅನ್ನುತ್ತಾನೆ.
ಅಂತಹ ದೇವೆತೆಗಳ ಅಧಿಪತಿಗೂ ದಳಪತಿಗಳಾದವರು ಮಹಾರುದ್ರದೇವರು.