Sunday, October 26, 2025
ಒಂದೇ ಬಳೆಯ ಹುಡುಗಿ
Saturday, June 21, 2025
ಅಷ್ಟ ಭೋಗಗಳು
- "ಅಷ್ಟ ಭಾಗ್ಯಗಳು" ಎಂದು ಪರಿಗಣಿತವಾದ ಎಂಟರಲ್ಲಿ ಮೊದಲನೆಯದು "ಅನ್ನ". ಯಾವ ಪ್ರಾಣಿಯ ಜೀವನ ನಡೆಯಬೇಕಾದರೂ ಮೊದಲನೆಯ ಅವಶ್ಯಕತೆ ಆಹಾರ. ಇಲ್ಲಿ ಅನ್ನ ಎಂದರೆ, ಹಿಂದೊಮ್ಮೆ ಬೇರೆ ಸಂಚಿಕೆಯಲ್ಲಿ ಚರ್ಚಿಸಿದಂತೆ, ಅಕ್ಕಿಯನ್ನು ಬೇಯಿಸಿ ಮಾಡಿದ ಪದಾರ್ಥ ಮಾತ್ರವಲ್ಲ. ದೇಹದ ಬೆಳವಣಿಗೆ ಮತ್ತು ಬೆಳೆದ ದೇಹವನ್ನು ಸುಸ್ಥಿತಿಯಲ್ಲಿ ಕಾಪಾಡಲು ಬೇಕಾಗುವ ಎಲ್ಲ ಖಾದ್ಯಗಳಿಗೂ "ಅನ್ನ" ಎಂದು ನಿರ್ದೇಶಿಸಿ "ಬೃಹದಾರಣ್ಯಕ ಉಪನಿಷತ್" ಹೇಳುವ "ಸಪ್ತಾನ್ನ ಪ್ರಕರಣ" ತಿಳಿಸಿಕೊಡುತ್ತದೆ. ಅನ್ನವಿಲ್ಲದೇ ಜೀವನವಿಲ್ಲ. ಆದ್ದರಿಂದ ಎಂಟು ಭಾಗ್ಯಗಳಲ್ಲಿ ಮೊದಲೆನೆಯದು ಅನ್ನ.
- ಎರಡನೆಯ ಭಾಗ್ಯ "ಉದಕ". ನೀರಿಲ್ಲದೆ ಬದುಕುವುದು ಸಾಧ್ಯವಿಲ್ಲ. ಉಸಿರಾಡುವ ಎಲ್ಲಾ ಪ್ರಾಣಿಗಳಿಗೂ ಗಾಳಿಯ ನಂತರ ನೀರು ಅತಿ ಮುಖ್ಯ. ವಾಸ್ತವಾಗಿ ಅನ್ನಕ್ಕಿಂತ ಮೊದಲು ನೀರು ಬೇಕು. ಆದರೆ ಕುಡಿಯುವ ನೀರು ಸೃಷ್ಟಿಯಲ್ಲಿ ಸುಲಭವಾಗಿ ಸಿಗುವುದು. ಆದ್ದರಿಂದ ಇಲ್ಲಿ ಅನ್ನ ಎರಡನೆಯದು ಎಂದು ಗಣಿತವಾಗಿದೆ. (ಮುಂದಿನ ಸಂಚಿಕೆಯಲ್ಲಿ ಚರ್ಚಿಸುವ "ಅಷ್ಟ ಭಾಗ್ಯಗಳು" ಎಂದು ನಿರ್ದೇಶಿಸುವ ಎಂಟು ಭಾಗ್ಯಗಳಲ್ಲಿ ನೀರೇ ಮೊದಲನೆಯದು. ಅದರಲ್ಲಿ ಅನ್ನ ಎಂಟರ ಲೆಕ್ಕದಲ್ಲಿ ಸೇರುವುದಿಲ್ಲ. ಮನುಷ್ಯನ ಅನ್ಯಾಯ ಜೀವನ ಕ್ರಮಗಳಿಂದ ಈಚಿನ ದಿನಗಳಲ್ಲಿ ನೀರು ಸಿಗುವುದು ಕಷ್ಟವಾಗಿದೆ).
- ಮೂರನೆಯ ಭಾಗ್ಯ "ತಾಂಬೂಲ". ತಾಂಬೂಲ ಎಂದರೆ ಕೇವಲ ಎಲೆ-ಅಡಿಕೆ-ಸುಣ್ಣ ಮಾತ್ರವಲ್ಲ. ತಾಂಬೂಲ ಸೇವನೆ ಊಟದ ಕೊನೆಯ ಅಧ್ಯಾಯ. ಅವುಗಳಲ್ಲಿ ಅವರವರ ಅಂತಸ್ತಿಗೆ ತಕ್ಕಂತೆ ಅಂತರವೂ ಉಂಟು. ಅದು ಕೇವಲ ಗೋಟು ಅಡಿಕೆ ಇರಬಹುದು ಅಥವಾ ಬಣ್ಣ ಕಟ್ಟಿದ, ಕಾಚು, ಸಕ್ಕರೆ, ಸುಗಂಧ ಮಿಶ್ರಿತವಾದ ಪುಡಿಯಡಕೆ ಇರಬಹುದು. ತಾಂಬೂಲ ಸೇವನೆ ಇದೆ ಅಂದರೆ ಊಟದ ನಂತರ ಸ್ವಲ್ಪ ವಿಶ್ರಾಂತಿಗೂ ಅವಕಾಶ ಇದೆ ಎಂದು ಅರ್ಥ. ಜೀವನದ ಇತರ ಚಟುವಟಿಕೆಗಳಿಗೆ ತಕ್ಷಣ ಓಡಬೇಕಾಗಿಲ್ಲ. ಕುಟುಂಬದ ಇತರ ಸದಸ್ಯರ, ಬಂಧು-ಬಾಂಧವರ, ಸ್ನೇಹಿತರ ಕೂಡ ಸ್ವಲ್ಪ ವಿನೋದದ ಕ್ಷಣಗಳನ್ನೂ ಕಳೆಯುವ ಅವಕಾಶವೂ ಒಂದು ಭೋಗವೇ.
- ನಾಲ್ಕನೆಯದು "ಪುಷ್ಪ". ಈಗ ಗಂಡಸರು ಹೂವಿನ ಹಾರಗಳನ್ನು ಧರಿಸುವುದು ತಪ್ಪಿಹೋಗಿದೆ. ಸ್ತ್ರೀಯರು ಕೂಡ ಮರೆತಿದ್ದಾರೆ. ಸುಗಂಧಭರಿತ ಹೂವುಗಳು ಮತ್ತು ಹೂವಿನ ಹಾರಗಳನ್ನು ಉಪಯೋಗಿಸುವುದು ಒಂದು ಭೋಗದ ರೀತಿ. ಅನೇಕ ಬಣ್ಣದ, ಸುವಾಸನೆಯ, ಗಾತ್ರದ ಹೂವುಗಳು ಸೊಗಸನ್ನು ಹೆಚ್ಚಿಸುವುದರ ಜೊತೆಗೆ ವಾತಾವರಣವನ್ನೂ ರಂಗೇರಿಸಬಲ್ಲುದು.
- ಐದನೆಯದು "ಚಂದನ". ಗಂಧದ ಮರಗಳು ಹೇರಳವಾಗಿ ಇದ್ದಾಗಿನ ಮಾತು. ಗಂಧ ತಂದು ತೇಯ್ದು ಸುಗಂಧ ಪೂಸಿಕೊಳ್ಳುತ್ತಿದ್ದ ಕಾಲದ ಮಾತು ಇದು. ಪುಟ್ಟಕೃಷ್ಣನ ದಾಸರು ವರ್ಣಿಸುವುದು "ಪೂಸಿದ ಶ್ರೀಗಂಧ ಮಯ್ಯೊಳಗಮ್ಮ" ಎಂದು. (ಈಗ ಅದು ಕೇವಲ ರಾಸಾಯನಿಕ ಗಂಧ ಸಿಂಪಡಣೆಗೆ ಸೀಮಿತವಾಗಿದೆ. ಕೆಲವುಕಡೆಯಂತೂ ದೊಡ್ಡ ಫ್ಯಾನುಗಳು ಈ ಕೆಲವನ್ನು ಬೇಜಾರಿಲ್ಲದೆ ಮಾಡುತ್ತವೆ).
- ಆರನೆಯ ಭೋಗ "ವಸನ". ಮಾನ ಮುಚ್ಚಲು ಬಟ್ಟೆ ಅನ್ನ-ನೀರಿನ ನಂತರದ ಸ್ಥಾನ ಪಡೆಯುತ್ತದೆ. ಅದು ಭೋಗದ ವಸ್ತುವೂ ಆಗಬಹುದು. ಬರಿಯ ಶುಭ್ರ ಬಟ್ಟೆಯಿಂದ ಜರತಾರಿ ಸೀರೆ-ಪಂಚೆ-ದಿರಿಸು, ಮುಂಡಾಸು, ಮೇಲು ಹೊದಿಕೆ, ಮುಂತಾದ ಅನೇಕ ರೀತಿಯಲ್ಲಿ ಜೀವನಕ್ಕೆ ಸೊಗಸನ್ನು ತಂದುಕೊಡುವ ಭೋಗ ಈ ವಸನದ್ದು.
- ಭೋಗಗಳಲ್ಲಿ ಏಳನೆಯದು "ಶಯ್ಯಾ". ಊಟವಾಗಿ ಹೊಟ್ಟೆ ತುಂಬಿತು. ಬಟ್ಟೆ ಸಿಕ್ಕಿತು. ನಂತರದ ಸ್ಥಾನ ದಣಿದ ದೇಹಕ್ಕೆ ನಿದ್ರೆ ಕೊಡುವುದು. ನೆಲದ ಮೇಲೆ ತೋಳನ್ನೇ ತಲೆದಿಂಬಾಗಿ ಇಟ್ಟುಕೊಂಡು ಮಲಗಬಹುದು. ಅದನ್ನು ಯಾರೂ ಭೋಗ ಅನ್ನುವುದಿಲ್ಲ. ಅದೇ ಸೊಗಸಾದ ಮೆತ್ತನೆಯ ಹಾಸಿಗೆಯ ಮೇಲೆ ಆಗಬಹುದು. ಸುಪ್ಪತ್ತಿಗೆಯೂ ಆಗಬಹುದು. ಇವು ನೆಲದ ಬದಲು ಸುಂದರ ಮಂಚದ ಮೇಲೂ ಇರಬಹುದು. ಸೊಳ್ಳೆಪರದೆ ಸೇರಿರಬಹುದು. ಹೊದೆಯಲು ಒಳ್ಳೆಯ ಪದರಗಳ ಹೊದಿಕೆ ಇರಬಹುದು. ಚಳಿಗಾಲದಲ್ಲಿ ಉಣ್ಣೆಯದು ಇರಬಹುದು. ಹೀಗೆ ಭೋಗದ ವಿವಿಧ ಮಜಲುಗಳು. ಜೊತೆಗೆ ತನ್ನದೇ ಮನೆಯಲ್ಲಿಯೂ ಇರಬಹುದು.
- ಎಂಟನೆಯ ಭೋಗವೆಂದರೆ "ಅಲಂಕಾರ". ಬರೀ ಬಟ್ಟೆ ಉಟ್ಟರೆ ಸಾಕೆ? ಆಭರಣಗಳು ಬೇಡವೇ? ಚಿನ್ನ, ವಜ್ರ ಮುಂತಾದವು. ಕುಂಕುಮ ಮುಂತಾದ ಬಣ್ಣ-ಬಣ್ಣದ ದ್ರವ್ಯಗಳು. ಸುಂದರವಾದ ಕೈಚೀಲ. ಕೈಗೆ ಕಸೂತಿ ಹಾಕಿದ ಕರ್ಚೀಫು. ಸ್ವಲ್ಪ ವಯಸ್ಸಾದ ಮೇಲೆ ಕೈಗೊಂಡು ಕೊರೆದ ಬೆತ್ತದ ಕೋಲು. ಹೀಗೆ. ಅವರವರ ಯೋಗ್ಯತೆ-ಅಭಿರುಚಿಗಳಿಗೆ ತಕ್ಕಂತೆ ಇವುಗಳ ಪಟ್ಟಿಯನ್ನು ಪಸರಿಸಬಹುದು.
Tuesday, April 22, 2025
ಅನ್ನದ ಹಾಹಾಕಾರ
ಅನ್ನದ ಹಾಹಾಕಾರ ಮುಗಿಲು ಮುಟ್ಟಿದ್ದ ಹಿಂದಿನ ಶತಮಾನದ ಐವತ್ತು-ಅರವತ್ತರ ದಶಕದಲ್ಲಿ ಸಮಾಜದ ಮೇಲೆ ಸಮತಾವಾದದ ಬಹಳ ಪ್ರಭಾವ ಇತ್ತು. ವರ್ಗ ಸಂಘರ್ಷ ಎಲ್ಲೆಡೆ ವಿಜೃಂಭಿಸುತ್ತಿದ್ದ ಕಾಲವದು. ಕನ್ನಡ ಸಾಹಿತ್ಯದ ಸಂದರ್ಭದಲ್ಲಿ ಅದು "ಕನ್ನಡ ನವೋದಯ" ಕಾಲಘಟ್ಟವನ್ನು ದಾಟಿ "ನವ್ಯ" ಅನ್ನುವ ಘಟ್ಟಕ್ಕೆ ಜಾರುತ್ತಿದ್ದ ಸಮಯ. ನವ್ಯ ಸಾಹಿತ್ಯದ ಹರಿಕಾರರಲ್ಲಿ ಒಬ್ಬರಾದ ಕೀರ್ತಿಶೇಷ ಎಂ. ಗೋಪಾಲಕೃಷ್ಣ ಅಡಿಗರ (1918-1992) ಜನಪ್ರಿಯ ಕವನವೊಂದು ಅದೇ ಸಮಯದಲ್ಲಿ, ಇದೇ ಅನ್ನದ ಹಾಹಾಕಾರ ಕುರಿತು ರಚಿತವಾದದ್ದು.
ಅಡಿಗರು ಒಮ್ಮೆ (1971) ಬೆಂಗಳೂರು ಲೋಕಸಭೆ ಕ್ಷೇತ್ರದಿಂದ (ಆಗ ಬೆಂಗಳೂರು ದಕ್ಷಿಣ ಕ್ಷೇತ್ರ ಇರಲಿಲ್ಲ) ಮಾಜಿ ಮುಖ್ಯಮಂತ್ರಿಗಳಾಗಿದ್ದ ಕೆಂಗಲ್ ಹನುಮಂತಯ್ಯನವರ ವಿರುದ್ಧ ಸ್ಪರ್ಧಿಸಿದ್ದರು. ಅವರ ಚುನಾವಣಾ ಪ್ರಚಾರ ಸಭೆಗಳ ಪ್ರಾರಂಭದಲ್ಲಿ ಈ ಗೀತೆಯನ್ನು ಖ್ಯಾತ ಗಮಕಿಗಳು ಮತ್ತು ಸುಗಮ ಸಂಗೀತ ಗಾಯಕರಾಗಿದ್ದ ಶ್ರೀ ಚಂದ್ರಶೇಖರ ಕೆದಿಲಾಯ ಅವರು ಹಾಡುತ್ತಿದ್ದರು. ಆ ನಂತರ ಅಡಿಗರು ಚುನಾವಣಾ ಭಾಷಣ ಮಾಡುತ್ತಿದ್ದರು. ಒಂದು ರೀತಿಯಲ್ಲಿ ಅದು ಅವರ ಚುನಾವಣಾ ಪ್ರಣಾಳಿಕೆಯಂತೆ ಇತ್ತು. ಚುನಾವಣೆಯಲ್ಲಿ ಅಡಿಗರು ಸೋತರು. ಆದರೆ ಈ ಕವನ ಬಹಳ ಪ್ರಸಿದ್ಧವಾಯಿತು. ನಂತರ ಅಡಿಗರು "ನ್ಯಾಷನಲ್ ಬುಕ್ ಟ್ರಸ್ಟ್" ಅಧ್ಯಕ್ಷರಾದರು. ಇನ್ನೂ ಅನೇಕ ರೀತಿಯಲ್ಲಿ ಸಾಹಿತ್ಯಕ್ಕೆ ಸೇವೆ ಸಲ್ಲಿಸಿದರು.
ಅನ್ನದ ಹಾಹಾಕಾರದ ಚರ್ಚೆಯ ಸಮಯದಲ್ಲಿ ಆ ಕವನ ನೆನಪಿಸಿಕೊಳ್ಳುವುದು ಒಳ್ಳೆಯದು.
*****
ಹೊಸ ನೆತ್ತರುಕ್ಕುಕ್ಕಿ ಆರಿಹೋಗುವ ಮುನ್ನ
ಹರೆಯದೀ ಮಾಂತ್ರಿಕನ ಮಾಟ ಮಸಳುವ ಮುನ್ನ
ಉತ್ಸಾಹ ಸಾಹಸದ ಉತ್ತುಂಗ ವೀಚಿಗಳ
ಈ ಕ್ಷುಭ್ದ ಸಾಗರವು ಬತ್ತಿಹೋಗುವ ಮುನ್ನ
ಕಟ್ಟುವೆವು ನಾವು ಹೊಸ ನಾಡೊಂದನು
ರಸದ ಬೀಡೊಂದನು
ನಮ್ಮೆದೆಯ ಕನಸುಗಳೆ ಕಾಮಧೇನು
ಆದಾವು ಕರೆದಾವು ವಾಂಛಿತವನು
ಕರೆವಕೈಗಳಿಗಿಹುದಿದೋ ಕನಸುಗಳ ಹರಕೆ
ಗುರಿತಪ್ಪದೊಮ್ಮುಖದ ಬಯಕೆ ಬೆಂಬಲಕೆ
ಕಟ್ಟುವೆವು ನಾವು ಹೊಸ ನಾಡೊಂದನು
ರಸದ ಬೀಡೊಂದನು
ನಾವು ಹಿಂದೆಗೆವೆವೇ ವೀರ ತರುಣರು ನಾವು
ಒಂದೆ ನೆಗೆತಕೆ ನೆಗೆವೆವೋ ಕಂದಕವನು
ಕುಟ್ಟಿ ಪುಡಿ ಮಾಡುವೆವು ಕೋಟೆಗಳನು
ಎದೆಮೆಟ್ಟಿ ಮುರಿಯುವೆವು ಅಸುರ ರಟ್ಟೆಗಳನು
ಕಟ್ಟುವೆವು ನಾವು ಹೊಸ ನಾಡೊಂದನು
ರಸದ ಬೀಡೊಂದನು
.........
.........
.........
ಇಂದು ಬಾಳಿದು ಕೂಳ ಕಾಳಗವು
ಹೊಟ್ಟೆಯೇ ಕೇಂದ್ರವಾಗಿದೆ ನರನ ಜೀವಿತಕ್ಕೆ
ಅನ್ನದನ್ಯಾಯ ದಾವಾಗ್ನಿಯಲಿ ದಹಿಸುತಿದೆ
ನರತೆ ಸಂಸ್ಕೃತಿ ಪ್ರೀತಿ ದಿವದ ಬಯಕೆ
ಕಟ್ಟುವೆವು ನಾವು ಹೊಸ ನಾಡೊಂದನು
ರಸದ ಬೀಡೊಂದನು
ಇರುವೆಲ್ಲವನು ಎಲ್ಲ ಜನಕೆ ತೆರವಾಗಿಸುವ
ಸಮಬಗೆಯ ಸಮಸುಖದ ಸಮದುಃಖದ
ಸಾಮರಸ್ಯದ ಸಾಮಗಾನ ಲಹರಿಯ ಮೇಲೆ
ತೇಲಿಬರಲಿದೆ ನೋಡು ನಮ್ಮ ನಾಡು
ಕಟ್ಟುವೆವು ನಾವು ಹೊಸ ನಾಡೊಂದನು
ರಸದ ಬೀಡೊಂದನು ಸುಖದ ಬೀಡೊಂದನು
*****
Wednesday, September 14, 2011
They also fought corruption, in their own way!
Was there any corruption long time ago? When did corruption actually start? Was there any fight against corruption in olden days? Can it ever be eradicated?
Answer to the last question appears to be an emphetic NO. It may be at the best made to lie low for sometime. But it will rear its head again, the multi headed serpet of corruption.
I recall two stories on fight on corruption. The stories were told to me by my father when I was a child. The first one may be well known. The second one may not be that well known.
The first one is about a wise man who was living in severe poverty. Even though every one in his village recognised his wisdom and respected him, he was not known outside his village. He would not use his wisdom to earn money for the maintainance of his family. But his wife one day firmly told him to go to the King, please him with his wisdom and come back with some money. Or else he would not be allowed entry in to the house. Naturally. The Homemaker who runs the home knows the real difficulties of making both ends meet.
The wise man had no alternative. To maintain domestic peace he went to the King's palace.
The Dwarapaalakas (Guards at the door) would not allow him inside the palace. After much pleading they agreed to let him in if he shared his prize with them when he came back. He promised the two guards that the prize he received will be shared equally with the two guards and he himself would not take anything home.
Once inside the palace, he met the King and pleased him by his wisdom by answering the difficult questions asked in the King's court. The king was about announce a prize to the wise man. The wise man requested the King to give a prize of his choice. Though surprised, the King agreed.
The wise man asked to be given an award of twenty lashes. Everyone including the King were surprised. But as agreed the King called the Lashing-man. At this moment, the wise man requested the king to call the two Dwarapaalas. When they arrived he told the King about the commitment he had made to share the Prize with them and requested the king to reward them with ten lashes each.
No need to say that the corrupt Door-men were punished and the wise man was rewarded by being appointed as the Chief Vigilance Commissioner in the King's court.
This story is attributed by some to Tenali Rama. some to Birbal. and some others to some one else. I would like to simply keep it as The Wise Man.